14,106 ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಕಾಲೇಜು ಶಿಕ್ಷಣ ಇಲಾಖೆ 2021-22ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 14,106 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1,3 ಮತ್ತು 5ನೇ ಸೆಮಿಸ್ಟರ್ ಅವಧಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅವಶ್ಯವಿರುವ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಲಾಗುತ್ತಿದೆ.
ವಿದ್ಯಾರ್ಹತೆ : ಕಾಲೇಜು ಶಿಕ್ಷಣ ಇಲಾಖೆ (DCE) ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸ್ನಾತಕೋತ್ತರ ಪದವಿ, ಪಿ.ಹೆಚ್.ಡಿ, ಎನ್ಇಟಿ/ಕೆ-ಸೆಟ್/ಎಸ್ಎಲ್ಇಟಿ, ಎಂ.ಫಿಎಲ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿದೆದದರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ತಿಳಿಸಲಾಗಿದೆ.
ವೇತನ : ಕಾಲೇಜು ಶಿಕ್ಷಣ ಇಲಾಖೆ (DCE) ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 – 11 – 2021