ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

Join Our WhatsApp Group

ರಾಜ್ಯದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಷಯಗಳ ಪ್ರಾಯೋಗಿಕ ಪರೀಕ್ಷೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ.

 

ಹೈಲೈಟ್ಸ್‌:

  • ಪಿಯು ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ.
  • ಏ.28 ರಿಂದ ಪರೀಕ್ಷೆ ಆರಂಭವಾಗಬೇಕಿತ್ತು.
  • ವಾರ್ಷಿಕ ಪರೀಕ್ಷೆ ನಂತರ ಪ್ರಾಯೋಗಿಕ ಪರೀಕ್ಷೆ.

ರಾಜ್ಯದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಷಯಗಳ ಪ್ರಾಯೋಗಿಕ ಪರೀಕ್ಷೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯು ವಿಜ್ಞಾನ ವಿಷಯಗಳಿಗೆ ಏಪ್ರಿಲ್ 28 ರಿಂದ ಮೇ. 4 ರವರಗೆ ಪ್ರಾಯೋಗಿಕ ಪರೀಕ್ಷೆ ನಡೆಸಬೇಕಿತ್ತು. ಈ ಪರೀಕ್ಷೆಗೆ ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿತ್ತು.

ಕೋವಿಡ್-19 ಸೋಂಕು ಹರಡುವಿಕೆ ತೀವ್ರವಾದ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ನಂತರದಲ್ಲಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

Join Our WhatsApp Group

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪಾಲಕರ ಜತೆ ಅಧಿಕಾರಿ ಹಂತದ ಸುದೀರ್ಘ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.


By Priya

Leave a Reply

Your email address will not be published. Required fields are marked *