Join Our WhatsApp Group

 

Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾದಲ್ಲಿ 512 ಚೀಫ್ ಎಕನಾಮಿಸ್ಟ್, ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ: ಹುದ್ದೆಗಳಿಗನುಸಾರ ಕನಿಷ್ಟ 23 ರಿಂದ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ.ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ: ಓಬಿಸಿ, ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 600/-ರೂ ಮತ್ತು ಪ.ಜಾ/ಪ,ಪಂ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ/ಗುಂಪು ಚರ್ಚೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bankofbaroda.in/index.htm ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

|| Download ||

Join Our WhatsApp Group


By Priya

Leave a Reply

Your email address will not be published. Required fields are marked *