ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆರೋಗ್ಯ ಇಲಾಖೆಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ 30 ವೈದ್ಯಾಧಿಕಾರಿಗಳು, ಹಿರಿಯ ಕ್ಷಯರೋಗಿ ಮೇಲ್ವಿಚಾರಕರು, ಕ್ಷಯರೋಗ ಸಂದರ್ಶಕರು, ಅಕೌಂಟೆಂಟ್, ಕೌನ್ಸಿಲರ್ ಮತ್ತು ಲ್ಯಾಬ್ ಟೆಕ್ನಿಷಿಯನ್ನು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

 

 

 

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 17,2021 ಮತ್ತು ನವೆಂಬರ್ 18,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

 

 

ವಿದ್ಯಾರ್ಹತೆ  : MBBS , DIPLOMA , MD , & PUC 

 

 

 

ವಯೋಮಿತಿ  : ಕನಿಷ್ಟ 18 ರಿಂದ ಗರಿಷ್ಟ 35 ವರ್ಷ.

 

 

ವೇತನ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೇಮಕಾತಿಯ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ, ಹಿರಿಯ ಕ್ಷಯರೋಗಿ ಮೇಲ್ವಿಚಾರಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,000/-ರೂ, ಕ್ಷಯರೋಗ ಸಂದರ್ಶಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,850/-ರೂ, ಅಕೌಂಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,697/-ರೂ, ಕೌನ್ಸಿಲರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,283/-ರೂ ಮತ್ತು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,000/-ರೂ ವೇತನವನ್ನು ನೀಡಲಾಗುವುದು.

 

 

 

ಸಂದರ್ಶನದ ವಿವರ : ನವೆಂಬರ್ 17,2021 ಮತ್ತು ನವೆಂಬರ್ 18,2021ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

ಸಂದರ್ಶನ ನಡೆಯುವ ಸ್ಥಳ : ಮುಖ್ಯ ಆರೋಗ್ಯಾಧಿಕಾರಿಗಳು, ಅನೆಕ್ಸ್ ಕಟ್ಟಡ, ಬಿ.ಬಿ.ಎಂ.ಪಿ ಕೇಂದ್ರ ಕಛೇರಿ, ಎನ್‌.ಆರ್‌.ಚಾಕ, ಬೆಂಗಳೂರು-02.

 

 

 

 

 

 


By Priya

Leave a Reply

Your email address will not be published.