BEML Recruitment 2020: ಎಕ್ಸ್ ಪರ್ಟ್/ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ..ನ.19ರೊಳಗೆ ಅರ್ಜಿ ಹಾಕಿ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಎಕ್ಸ್ ಪರ್ಟ್/ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 19,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

 

ವಿದ್ಯಾರ್ಹತೆ: ಇಂಜಿನಿಯರ್ ವಿದ್ಯಾರ್ಹತೆ, ಪೋಸ್ಟ್ ಗ್ರಾಜುಯೇಟ್, ಎಂಬಿಎ, ಎಂಎಸ್‌ಡಬ್ಲ್ಯೂ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

 

ವಯೋಮಿತಿ: ನವೆಂಬರ್ 19,2020ರ ಅನ್ವಯ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

 

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

 

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

 

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

 

ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

 

ಕಚೇರಿ ವಿಳಾಸ: Manager (HR), BEML Limited, Recruitment cell, BEML Soudha, No,23/1, 4th Main road, S.R nagar, Bangalore-560027.

 

 

|| Official Website || 


|| NOTIFICATION ||


By Priya

Leave a Reply

Your email address will not be published. Required fields are marked *