Bidar District Court Recruitment 2021 : 21 ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿ, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 12 ಶೀಘ್ರಲಿಪಿಗಾರ ಗ್ರೇಡ್ III ಮತ್ತು 9 ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 9,2021 ರಿಂದ ಅಕ್ಟೋಬರ್ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಹುದ್ದೆಗಳ ವಿವರ: ಒಟ್ಟು 21 ಹುದ್ದೆಗಳು

ವಿದ್ಯಾರ್ಹತೆ: PUC & DIPLOMA 

ವೇತನ : 21,400/- ರಿಂದ 42,000/-

ವಯೋಮಿತಿ: 18 – 35 ವರ್ಷ

ಆಯ್ಕೆಯ ವಿಧಾನ: ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಬೆರಳಚ್ಚುಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

 

APPLY ONLINE


By Priya

Leave a Reply

Your email address will not be published. Required fields are marked *