Join Our WhatsApp Group


Dakshina Kannada District Court Recruitment 2021: 34 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ 34 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು 

ವಯೋಮಿತಿ: ಜವಾನ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪ.ಜಾ/ಪ.ಪಂ/ಪ್ರ-1ರ ಗರಿಷ್ಟ 40 ವರ್ಷ ಮತ್ತು ಪ್ರ-2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

ವೇತನ: ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ, ಪ್ರ-1ರ ಹಾಗೂ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://districts.ecourts.gov.in/dakshinakannada ಗೆ ಭೇಟಿ ನೀಡಿ.

ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 25,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

||DOWNLOAD||



By Priya

Leave a Reply

Your email address will not be published. Required fields are marked *