Dharwad WCD Recruitment 2021: 93 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 6 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 20 ಅಂಗನವಾಡಿ ಕಾರ್ಯಕರ್ತೆ ಮತ್ತು 73 ಅಂಗನವಾಡಿ ಸಹಾಯಕಿಯರ ಸೇರಿದಂತೆ ಒಟ್ಟು 93 ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಲಾಗಿರುವ ಡೌನ್ಲೋಡ್ ಬಟನನ್ನು ಒತ್ತಿ
Click on Download
ಡೌನ್ಲೋಡ್ ಮೇಲೆ ಕ್ಲಿಕ್ ಮಾಡಿ
ವಯೋಮಿತಿ: 18 ರಿಂದ ಗರಿಷ್ಟ 35 ವರ್ಷ
ಒಟ್ಟು ಹುದ್ದೆಗಳು: 93
ಅರ್ಜಿ ಸಲ್ಲಿಸುವುದು ಹೇಗೆ:
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ https://anganwadirecruit.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 31,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.