ESIC Karnataka Recruitment 2020: ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ರಾಜ್ಯ ನೌಕರರ ವಿಮಾ ನಿಗಮವು 3 ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 18,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ. 

ವಿದ್ಯಾರ್ಹತೆ: ಡಿಎನ್‌ಬಿ, ಡಿಎಂ ಮತ್ತು ಎಂ.ಸಿಹೆಚ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ: ನವೆಂಬರ್ 18,2020ರ ಅನ್ವಯ ಗರಿಷ್ಟ 69 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವೇತನದ ವಿವರ: ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,75,000/-ರೂ ವೇತನವನ್ನು ನೀಡಲಾಗುವುದು. ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ: ಈ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ. ಸಂದರ್ಶನದ ವಿವರ: ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನದ ನಡೆಯುವ ದಿನಾಂಕ ಮತ್ತು ಸಮಯ: ನವೆಂಬರ್ 18,2020ರಂದು ಬೆಳಗ್ಗೆ 9:30ಕ್ಕೆ ಇಎಸ್‌ಐಸಿಯ

ಅಧಿಕೃತ ವೆಬ್‌ಸೈಟ್‌: https://www.esic.nic.in/

ಸಂದರ್ಶನ ನಡೆಯುವ ಸ್ಥಳ: ಇಎಸ್ಐಸಿ ಎಂಸಿ ಪಿಜಿಐಎಂಎಸ್ಆರ್ ಮತ್ತು ಮಾಡೆಲ್ ಹಾಸ್ಪಿಟಲ್, ರಾಜಾಜಿನಗರ, ಬೆಂಗಳೂರು.

 

ಅಧಿಸೂಚನೆ ಓದಿ

 


Leave a Reply

Your email address will not be published. Required fields are marked *