ಉಚಿತ ತರಬೇತಿಗೆ ಹೆಸರು ನೋಂದಾಯಿಸಿ.

 

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯು 18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರಿಗೆ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು ಉಚಿತ ತರಬೇತಿ ನೀಡುತ್ತಿದೆ. ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಜನವರಿ 22ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

 

ತರಬೇತಿಯು ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ ಹಾಗೂ ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗ್ಗೆ ಉಚಿತ ಮಾಹಿತಿ ನೀಡಲಾಗುತ್ತದೆ.

 

ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಆದ್ಯತೆ ನೀಡಲಾಗುವುದು. ಫೆಬ್ರವರಿ ತಿಂಗಳಿನಲ್ಲಿ ತರಬೇತಿಯು ಆರಂಭವಾಗುತ್ತಿದ್ದು, ಆಸಕ್ತರು ಜನವರಿ 22 ರೊಳಗೆ ತಮ್ಮ ಹೆಸರು, ವಿಳಾಸವನ್ನು ನೋಂದಣಿ ಮಾಡಿಕೊಳ್ಳಬಹುದು.

 

ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ದೂರವಾಣಿ ಸಂಖ್ಯೆ 9483485489, 9482188780 ಸಂಪರ್ಕಿಸಬಹುದಾಗಿದೆ.


By Priya

Leave a Reply

Your email address will not be published. Required fields are marked *