ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ (ನಿ) ಕೊಪ್ಪಳ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕುರಿ/ ಮೇಕೆ ಘಟಕ ಸ್ಥಾಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕುರಿ/ಮೇಕೆ ಘಟಕ ಸ್ಥಾಪಿಸಲು ವಿಷೇಶ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ 9, ಗಿರಿಜನ ಉಪಯೋಜನೆ ಪರಿಶಿಷ್ಟ ಪಂಗಡಕ್ಕೆ 4 ಮತ್ತು ಸಾಮಾನ್ಯ ಯೋಜನೆಯಡಿ 42 ಗುರಿಗಳನ್ನು ನಿಗದಿಪಡಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದೆ. ನಿಗದಿತ ಅರ್ಜಿಗಳನ್ನು ಸಹಾಯಕ ನಿರ್ದೇಶಕರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಕೊಪ್ಪಳ ಕಛೇರಿಯಿಂದ ಪಡೆದುಕೊಳ್ಳಬಹುದುದು
ಅಗತ್ಯ ದಾಖಲೆಗಳ ಜೊತೆ ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 25ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.