ಅತಿಥಿ ಉಪನ್ಯಾಸಕರ ನೇಮಕ; ಆಸಕ್ತರು ಅರ್ಜಿ ಸಲ್ಲಿಸಿ

ರಾಯಚೂರು, ಆಗಸ್ಟ್ 8; ರಾಯಚೂರಿನ ಯರಮರಸ್ ಕ್ಯಾಂಪ್‌ನಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಖಾಲಿ ಇರುವ ವಿಷಯವಾರು ಉಪನ್ಯಾಸಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಗೌರವಧನದ ಆಧಾರದ ಮೇಲೆ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ. ಇಂಗ್ಲಿಶ್ ಉಪನ್ಯಾಸಕರ ನೇಮಕಾತಿಗೆ ಎಂ.ಎ.ಬಿ.ಇಡ್, ರಸಾಯನಶಾಸ್ತ್ರ ಉಪನ್ಯಾಸಕರ ನೇಮಕಾತಿಗೆ ಎಂ.ಎಸ್.ಸಿ. ಬಿ.ಇಡ್, ವ್ಯವಹಾರ ಅಧ್ಯಯನ ಉಪನ್ಯಾಸಕರ ನೇಮಕಾತಿಗೆ ಎಂ.ಕಾಂ.ಬಿ.ಇಡ್ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

 

ಆಸಕ್ತರು ಅರ್ಜಿ ಸಲ್ಲಿಸಲು ಆಗಸ್ಟ್ 13ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸ್ವವಿವರ, ಅನುಭವ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳೊಂದಿಗೆ ಕಾಲೇಜಿಗೆ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9972564776.

 


By Priya

Leave a Reply

Your email address will not be published. Required fields are marked *