HAL Recruitment 2020: ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಹೆಚ್‌ಎಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ: ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ: Technical Training Institute, Hindustan Aeronautics Limited, Suranjan Das Road, Vimanapura Post, Bengaluru-560017.

♥ NOTIFICATION

 

|| Official Website ||


By Priya

Leave a Reply

Your email address will not be published. Required fields are marked *