Join Our WhatsApp Group

Haveri Zilla Panchayat Recruitment 2021: 21 ಸಂಯೋಜಕರು ಮತ್ತು ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 21 ತಾಲೂಕು ಎಂಐಎಸ್ ಸಂಯೋಜಕರು, ತಾಲೂಕು ತಾಂತ್ರಿಕ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾರ್ಚ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ: ತಾಲೂಕು ಎಂಐಎಸ್ ಸಂಯೋಜಕರು ಹುದ್ದೆಗಳಿಗೆ ಎಂಸಿಎ/ಇಂಜಿನಿಯರಿಂಗ್ ಪದವಿ, ತಾಲೂಕು ತಾಂತ್ರಿಕ ಸಂಯೋಜಕರು ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಡಿಪ್ಲೋಮಾ/ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.

ವೇತನ: ತಾಲೂಕು ಎಂಐಎಸ್ ಸಂಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ,

ತಾಲೂಕು ತಾಂತ್ರಿಕ ಸಂಯೋಜಕರು ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/-ರೂ ಮತ್ತು

ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://haveri.nic.in/en/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

|| Notifications ||

Join Our WhatsApp Group


By Priya

Leave a Reply

Your email address will not be published. Required fields are marked *