ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 23,2021 ರಿಂದ ಪ್ರಾರಂಭವಾಗಿ ಡಿಸೆಂಬರ್ 06,2021 ರಂದು ಕೊನೆಗೊಳ್ಳುತ್ತದೆ.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಇನ್ಸ್ಟ್ರುಮೆಂಟೇಶನ್, ಕಂಪ್ಯೂಟರ್ ಸೈನ್ಸ್
ವಯೋಮಿತಿ : ಕನಿಷ್ಟ 18 ರಿಂದ ಗರಿಷ್ಟ 25 ವರ್ಷ
ವೇತನ : 25,000/-ರೂ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06 – 12 – 2021