ದಾವಣಗೆರೆ; ಡಿ.28 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ

ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದಾವಣಗೆರೆಯಲ್ಲಿ ಡಿಸೆಂಬರ್ 28ರಂದು ಜಿಲ್ಲಾ ಮಟ್ಟದ ಉದ್ಯೋಗಮೇಳವನ್ನು ಏರ್ಪಡಿಸಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು ಉದ್ಯೋಗ ಮೇಳದ ಉಪಯೋಗ ಪಡೆದುಕೊಳ್ಳಬಹುದಾಗಿದೆ.

ಡಿಸೆಂಬರ್ 28ರಂದು ಬೆಳಗ್ಗೆ 10 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯ, ಯು.ಬಿ.ಡಿ.ಟಿ ಇಂಜನಿಯರಿಂಗ್ ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ ದಾವಣಗೆರೆ ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಉದ್ಯೋಗ ಮೇಳಕ್ಕೆ ಆಗಮಿಸಿದ ಅಭ್ಯರ್ಥಿಗಳ ನೋಂದಣಿ ಕಾರ್ಯಕ್ರಮವಿರುತ್ತದೆ. ನಂತರ 11 ಗಂಟೆಯಿಂದ ಕಾರ್ಯಕ್ರಮ ಪ್ರಾರಂಭವಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 20 ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. ಇದರಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎಂ ಹಾಗೂ ಸ್ನಾತಕೋತ್ತರ ಪದವಿ ಪಡೆದ ಗ್ರಾಮೀಣ ಹಾಗೂ ನಗರ ಪ್ರದೇಶದ ನಿರುದ್ಯೋಗ ಯುವಕ/ ಯುವತಿಯರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಉದ್ಯೋಗ ಮೇಳಕ್ಕೆ ಆಗಮಿಸುವವರು ತಮ್ಮ ಸ್ವವಿವರ, ವಿದ್ಯಾರ್ಹತೆ ದಾಖಲಾತಿಗಳು, ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಪಡಿತರ ಚೀಟಿಯೊಂದಿಗೆ ಭಾಗವಹಿಸಬೇಕು.

ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಬಳಸಿ ಆನ್‍ಲೈನ್ ಮೂಲಕ ನೋಂದಣಿ ಮಾಡಬಹುದು.

 


By Priya

Leave a Reply

Your email address will not be published. Required fields are marked *