ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸೆಪ್ಟೆಂಬರ್ 14ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 5ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿವೆ.

ಸೆಪ್ಟೆಂಬರ್ 14ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. 18 ರಿಂದ 35 ವರ್ಷದ ವಯೋಮಾನದವರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-255294.

ಉದ್ಯೋಗ ಮೇಳ ನಡೆಯುವ ಸ್ಥಳ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.


By Priya

Leave a Reply

Your email address will not be published. Required fields are marked *