ಶಿವಮೊಗ್ಗದಲ್ಲಿ ಡಿಸೆಂಬರ್ 21ರಂದು ಉದ್ಯೋಗ ಮೇಳ

ಜಿಲ್ಲಾ ಪಂಚಾಯತ್‌ ಶಿವಮೊಗ್ಗ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ದೀನ್‌ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಸಹಯೋಗದಲ್ಲಿ ಡಿಸೆಂಬರ್ 21ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತವಾಗಿದೆ.

ವಿದ್ಯಾರ್ಹತೆ; ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಡಿಪ್ಲೋಮಾ, ಯಾವುದೇ ಪದವಿ, ಯಾವದೇ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಅಭ್ಯರ್ಥಿಗಳಿಗೆ ಸೂಚನೆಗಳು

* ಕನಿಷ್ಠ 10 ಬಯೋಡಾಟಾಗಳ ಝೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು

* ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಝೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.

* ಆಧಾರ್ ಕಾರ್ಡ್‌ ಝೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು

* ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಕಟ್ಟಬೇಕಿಲ್ಲ

* ಮೇಳದಲ್ಲಿ ಪಾಲ್ಗೊಳ್ಳಲು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು

* ಆನ್‌ಲೈನ್ ನೋಂದಣಿ ಆಗದಿದ್ದರೆ ಸ್ಥಳದಲ್ಲಿಯೇ ನೋಂದಣಿ ಮಾಡಿಸಬೇಕು

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 9480876005/ 7760932206/ 9483815226.


By Priya

Leave a Reply

Your email address will not be published. Required fields are marked *