ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ನ.18ರ ತನಕ ಅರ್ಜಿ ಹಾಕಿ

ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 18ರೊಳಗೆ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು 2020-21ನೇ ಸಾಲಿನಿಂದ ಪ್ರಾರಂಭಿಸಲಾಗಿದೆ. ಯೋಜನೆಯ ಅನುಷ್ಟಾನಕ್ಕಾಗಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಕರೆಯಲಾಗಿದೆ.

 

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಆಹಾರ ತಂತ್ರಜ್ಞಾನ/ಆಹಾರ ಇಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ/ಪದವಿಯನ್ನು ಪ್ರತಿಷ್ಠಿತ ರಾಷ್ಟ್ರ/ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪಡೆದಿರಬೇಕು

 

ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ 3-5 ವರ್ಷಗಳ ಅನುಭವವಿರಬೇಕು.

ಒಂದು ವೇಳೆ ಆಹಾರ ತಂತ್ರಜ್ಞಾನ ವಿಷಯದಲ್ಲಿ ಅರ್ಹತೆ ಹೊಂದಿರುವ ವ್ಯಕ್ತಿಗಳು ಲಭ್ಯವಾಗದಿದ್ದರೆ, ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ದಪಡಿಸುವಿಕೆಯಲ್ಲಿ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಗಳನ್ನು ಪರಿಗಣಿಸಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷಾಜ್ಞಾನ ಅತ್ಯವಶ್ಯಕವಾಗಿದೆ. ಅರ್ಜಿ ನಮೂನೆಗಳು ಜಂಟಿ ಕೃಷಿ ನಿರ್ದೇಶಕರ ಕಛೇರಿ, ದಾವಣಗೆರೆಯಲ್ಲಿ ಲಭ್ಯವಿದ್ದು, ಭರ್ತಿ ಮಾಡಿ ನವೆಂಬರ್ 18ರೊಳಗೆ ಜಂಟಿ ಕೃಷಿ ನಿರ್ದೇಶಕರ ಕಛೇರಿ, ದಾವಣಗೆರೆ ಇವರ ಕಛೇರಿಗೆ ಸಲ್ಲಿಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು. ಮೊಬೈಲ್‌ ನಂಬರ್ 8277931105ಗೆ ಕರೆ ಮಾಡಬಹುದು.

 


By Priya

Leave a Reply

Your email address will not be published. Required fields are marked *