RDPR Recruitment 2021 : ಒಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ಯಲ್ಲಿ ಒಂಬುಡ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬೆಳಗಾವಿ, ಬೆಂಗಳೂರು ಗ್ರಾಮಾಂತರ/ನಗರ, ಶಿವಮೊಗ್ಗ, ಚಿತ್ರದುರ್ಗ, ಬೀದರ, ಹಾಸನ/ಕೊಡಗು, ಕೊಪ್ಪಳ ಮತ್ತು ವಿಜಯನಗರದಲ್ಲಿ ಒಂಬುಡ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 14,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

RDPR ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಒಂಬುಡ್ಸ್‌ಮನ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ/ಮ್ಯಾನೇಜ್ಮೆಂಟ್ ಈ ಕ್ಷೇತ್ರಗಳಲ್ಲಿ ಕಡೆಯ ಪಕ್ಷ 10 ವರ್ಷಗಳ ಸೇವಾನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

RDPR ನೇಮಕಾತಿ 2021 ವಯೋಮಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಒಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 66 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

RDPR ನೇಮಕಾತಿ 2021 ವೇತನ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಒಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/- ರಿಂದ 20,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

RDPR ನೇಮಕಾತಿ 2021 ಆಯ್ಕೆ ಪ್ರಕ್ರಿಯೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಒಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

RDPR ನೇಮಕಾತಿ 2021 ಅರ್ಜಿ ಶುಲ್ಕ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಒಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

RDPR ನೇಮಕಾತಿ 2021 ಅರ್ಜಿ ಸಲ್ಲಿಕೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ನೇಮಕಾತಿಯ ಒಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ rdpr.karnataka.gov.in ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಅರ್ಜಿಯನ್ನು ಜನವರಿ 14,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಕೊನೆಯ ದಿನಾಂಕದ ನಂತರ ಬಂದಂತಹ ಅರ್ಜಿಗಳನ್ನು ಮತ್ತು ಅಪೂರ್ಣ ಮಾಹಿತಿಯುಳ್ಳ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಕಚೇರಿಗೆ ಭೇಟಿ ನೀಡಬಹುದು.

ಕಚೇರಿ ವಿಳಾಸ: ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ.1234, ಕೆ.ಎಸ್.ಐ.ಐ.ಡಿ.ಸಿ, ಕಟ್ಟಡ, ಐ.ಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ, ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು-560044.


By Priya

Leave a Reply

Your email address will not be published. Required fields are marked *