ಶಿವಮೊಗ್ಗ ಕೋರ್ಟ್‌ನಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚು-ನಕಲುಗಾರರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಜನವರಿ 30, 2022 ಕೊನೆಯ ದಿನ.

 

ಒಟ್ಟು 4 ಬೆರಳಚ್ಚು-ನಕಲುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ. ಡಿಸೆಂಬರ್ 27 ರಿಂದ 2022ರ ಜನವರಿ 30ರ ರಾತ್ರಿ 11.59ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ ಉತ್ತೀರ್ಣಗೊಂಡಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

Notification


By Priya

Leave a Reply

Your email address will not be published. Required fields are marked *