Karnataka SSCL Exams 2021 Postponed ?: ಎಸ್‌ಎಸ್‌ಎಲ್‌ಸಿ ಹಾಗೆಯೇ ಪಾಸ್ ಮಾಡಿದರೆ ಮುಂದೇನು ?; ಸಚಿವ ಸುರೇಶ್ ಕುಮಾರ್

Join Our WhatsApp Group

ರಾಜ್ಯದೆಲ್ಲೆಡೆ ಕೊರೋನಾ ಸೋಂಕು ಹೆಚ್ಚಳದಿಂಗಾಗಿ ಸರ್ಕಾರವು ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಅನ್ನು ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗುತ್ತದೆಯೇ ಎಂಬ ಕುತೂಹಲ ಎಲ್ಲೆಡೆ ಮೂಡಿದೆ. ಇದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಮಾಹಿತಿ ಇಲ್ಲಿದೆ.

ಸರ್ಕಾರವು ಈಗಾಗಲೇ ಜೂನ್ 21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ದಿನಾಂಕ ನಿಗದಿ ಮಾಡಿದೆ. ಪರೀಕ್ಷೆಗೆ ಇನ್ನೂ ಒಂದೂ ವರೆ ತಿಂಗಳು ಬಾಕಿ ಇದೆ ಹಾಗಾಗಿ ಪರೀಕ್ಷೆಯ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Join Our WhatsApp Group

ಚಾಮರಾಜನಗರದಲ್ಲಿ ಮಾತನಾಡಿದ ಅವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದರೆ ಮುಂದೇನು ? ಅವರ ಭವಿಷ್ಯ ಹೇಗೆ ಹಾಗಾಗಿ ಪರೀಕ್ಷೆಯನ್ನು ಮುಂದೂಡುವ ಪ್ರಶ್ನೆಯೇ ಇಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಗಮನಿಸಿಕೊಂಡು ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.


By Priya

Leave a Reply

Your email address will not be published. Required fields are marked *