ಕೊಂಕಣ್ ರೈಲ್ವೆ ಕಾಪೋರೇಷನ್ ಲಿಮಿಟೆಡ್ನಲ್ಲಿ (ಕೆಆರ್ಸಿಎಲ್) ಇಂಜಿನಿಯರಿಂಗ್ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಉದ್ಯೋಗ ತರಬೇತಿ (ಅಪ್ರೆಂಟೀಸ್ಶಿಪ್) ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ.
2019, 2020 ಮತ್ತು 2021ರ ಅವಧಿಯಲ್ಲಿ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಒಂದು ವರ್ಷಕ್ಕಿಂತ ಹೆಚ್ಚು ವೃತ್ತಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ. ಈ ತರಬೇತಿಯು ಒಂದು ವರ್ಷ ಇರಲಿದೆ.
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ.
ಅರ್ಜಿ ಸಲ್ಲಿಸಲು ಕೊನೇ ದಿನ : 22.11.2021
ವಿದ್ಯಾರ್ಹತೆ : Diploma & BE.