KSP Recruitment 2021 : 100 ಕಾನ್ಸ್‌ಟೇಬಲ್ ಮತ್ತು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು(ಕೆಎಸ್‌ಪಿ) 2021ನೇ ಸಾಲಿನ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ 100 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಕ್ರೀಡಾ ಅಭ್ಯರ್ಥಿಗಳಿಂದ (ಪುರುಷರು ಮತ್ತು ಮಹಿಳೆಯರು) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2021 ವಿದ್ಯಾರ್ಹತೆ: ಕೆಎಸ್‌ಪಿ ಪಿಸಿ ಮತ್ತು ಪಿಎಸ್‌ಐ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು; 12ನೇ ತರಗತಿ; ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಪದವಿ ಹೊಂದಿರಬೇಕು.

ಕೆಎಸ್‌ಪಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಿದ್ದು, ಕರ್ನಾಟಕದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಆಗಸ್ಟ್ 31, 2021 ರಿಂದ ಪ್ರಾರಂಭವಾಗಿ ಸೆಪ್ಟೆಂಬರ್ 29,2021 ರಂದು ಕೊನೆಗೊಳ್ಳಲಿದೆ.

DOWNLOAD


By Priya

Leave a Reply

Your email address will not be published. Required fields are marked *