ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 1978 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 18, 2021 ಕೊನೆಯ ದಿನವಾಗಿದೆ.

ಅಸಿಸ್ಟೆಂಟ್ ಕಮಾಂಡೆಂಟ್ 35, ಇನ್ಸ್‌ಪೆಕ್ಟರ್ 30, ಸಬ್ ಇನ್ಸ್‌ಪೆಕ್ಟರ್ 656, ಹೆಡ್ ಕಾನ್ಸ್‌ಟೇಬಲ್ 1181 ಮತ್ತು ಕಾನ್ಸ್‌ಟೇಬಲ್ 76 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

 

 

 

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. ndrf.gov.in

ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಭ್ಯರ್ಥಿಗಳು 18 ಅಕ್ಟೋಬರ್ 2021ರೊಳಗೆ ಸಲ್ಲಿಕೆ ಮಾಡಬಹುದು. ಅರ್ಜಿ ಡೌನ್‌ಲೋಡ್ ಮಾಡುವಾಗ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ನೀಡಬೇಕು ಎಂದು ಸೂಚಿಸಲಾಗಿದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಕೆ ಮಾಡಲು ವಿಳಾಸ; DIG (Estt), HQ NDRF, 6th Floor, NDCC-II Building, Jai Singh Road, New Delhi – 110001.


By Priya

Leave a Reply

Your email address will not be published. Required fields are marked *