‘ಪದವಿ ಮತ್ತು ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಎಕ್ಸಾಮ್ ಸಾಧ್ಯವಿಲ್ಲ’


ಸರ್ಕಾರಿ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಆನ್‌ಲೈನ್ ಪರೀಕ್ಷೆಗಳನ್ನು ನಡೆಸುವ ಸಾಧ್ಯವಿಲ್ಲ

ಸರ್ಕಾರಿ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಆನ್‌ಲೈನ್ ಪರೀಕ್ಷೆಗಳನ್ನು ನಡೆಸುವ ಸಾಧ್ಯವಿಲ್ಲ

  • ಉನ್ನತ ಶಿಕ್ಷಣ ಸಚಿವ ಡಾ. ಸಿ ಅಶ್ವತ್ಥನಾರಾಯಣ
  • ಡೀಮ್ಡ್ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಆನ್‌ಲೈನ್ ನಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿದೆ

ಸರ್ಕಾರಿ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ  ಆನ್‌ಲೈನ್ ಪರೀಕ್ಷೆಗಳನ್ನು ನಡೆಸುವ ಸಾಧ್ಯವಿಲ್ಲ ಉನ್ನತ ಶಿಕ್ಷಣ ಸಚಿವ ಡಾ. ಸಿ ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾರಾಯಣ್(Ashwath Narayan), ಸರ್ಕಾರ ನಡೆಸುವ ಸಂಸ್ಥೆಗಳಲ್ಲಿ ಆನ್‌ಲೈನ್ ವಿಧಾನ ಪರೀಕ್ಷೆಗಳು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

Join Our WhatsApp Group


ಆನ್‌ಲೈನ್ ಮೂಲಕ ಪರೀಕ್ಷೆಗಳನ್ನು ನಡೆಸಲು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಬೇಡಿಕೆ ಇದೆ. ಆದರೆ ಮೂಲಸೌಕರ್ಯಗಳ ಕೊರತೆಯಿಂದ ಆನ್‌ಲೈನ್ ಪರೀಕ್ಷೆ(Online Exams)ಗಳನ್ನು ನಡೆಸಲು ಸಾಧ್ಯವಿಲ್ಲ ಎಂದರು.


ಪರೀಕ್ಷೆಗಳನ್ನು ಭೌತಿಕ ಕ್ರಮದಲ್ಲಿ ನಡೆಸಲಾಗುವುದು ಡೀಮ್ಡ್ ಮತ್ತು ಖಾಸಗಿ ವಿಶ್ವವಿದ್ಯಾಲಯ(Private Universities)ಗಳಲ್ಲಿ  ಆನ್‌ಲೈನ್ ನಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿದೆ, ಆದರೆ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಮತ್ತು ಕಾಲೇಜುಗಳಲ್ಲಿ ಇದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಸ್ತೆ ಸಾರಿಗೆ ನಿಗಮದ ನೌಕರರು ನಡೆಸುತ್ತಿರುವ ಮುಷ್ಕರ(Bus Strike)ದಿಂದಾಗಿ ಪರೀಕ್ಷೆಯ ವೇಳಾಪಟ್ಟಿಯ ಮೇಲೆ ಬೀರುವ ಪರಿಣಾಮ ಕುರಿತು ಮಾತನಾಡಿದ ಅವರು, ಸಾರಿಗೆ ನೌಕರರ ಮುಷ್ಕರದಿಂದಾಗಿ ಪದವಿ, ಪಿಜಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಪರೀಕ್ಷೆಗಳ ಟೈಮ್ ಟೇಬಲ್ ಡ ಮೇಲೆ ಪರಿಣಾಮ ಬೀರಿದೆ. ಹಾಗಾಗಿ ಅವುಗಳನ್ನ ಸಧ್ಯ ಮುಂದೋಡಲಾಗಿದೆ. ಮುಷ್ಕರ ಮುಗಿದ ಕೂಡಲೇ ಪರೀಕ್ಷೆಗಳ ದಿನಾಂಕ ಘೋಷಿಸಿ, ನಡೆಸಲಾಗುವುದು ಎಂದು ಹೇಳಿದ್ದಾರೆ.

Join Our WhatsApp Group


3 thoughts on “NO ONLINE EXAM FOR DEGREE AND PG STUDENTS”
  1. What happened student future, we are very confused about our exam. please conduct our exams in the covid -19
    situation. we are ready for take the precautions.

Leave a Reply

Your email address will not be published. Required fields are marked *