ಶಿವಮೊಗ್ಗದಲ್ಲಿ ಲೆಕ್ಕಿಗ ಮತ್ತು ಜವಾನ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವ ಲೆಕ್ಕಿಗರು ಮತ್ತು ಜವಾನರ ತಲಾ 01 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು 1 ವರ್ಷದ ಕರಾರಿನ ಆಧಾರದ ಮೇಲಿದ್ದು ಆಯ್ಕೆಯಾದ ಸಿಬ್ಬಂದಿಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿಯನ್ನು ಬಿಳಿ ಹಾಳೆಯಲ್ಲಿ, ಸ್ವವಿವರಗಳನ್ನು ನಮೂದಿಸಿದ ಬಯೋಡಾಟ, ಅಂಕಪಟ್ಟಿ, ಅನುಭವ ಪ್ರಮಾಣ ಪತ್ರದೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸೊಸೈಟಿ ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಇವರ ಹೆಸರಿಗೆ ಬರೆದು, ಈ ಅರ್ಜಿಯನ್ನು ಕಾರ್ಮಿಕ ಅಧಿಕಾರಿ/ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಅಧಿಕಾರಿಗಳ ಕಛೇರಿ, 2ನೇ ಮಹಡಿ ವಾಣಿಜ್ಯ ಸಂಕೀರ್ಣ, ಸಿ.ಐ.ಟಿ.ಬಿ (ಸೂಡ) ಕಾಂಪ್ಲೆಕ್ಸ್, ಪೊಲೀಸ್ ಚೌಕಿ, ವಿನೋಬನಗರ, ಶಿವಮೊಗ್ಗ ಇವರಿಗೆ ಸೆಪ್ಟೆಂಬರ್ 27, 2021ರೊಳಗೆ ತಲುಪುವಂತೆ ಸಲ್ಲಿಸಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ:
ವಯೋಮಿತಿ : 18 – 35
ವೇತನ : 10,000 – 15,000