SBI SCO Recruitment 2021 : 22 ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳ ನೋಂದಣಿ ಮತ್ತು ಅರ್ಜಿ ಪ್ರಕ್ರಿಯೆ ಆಗಸ್ಟ್ 13, 2021 ರಿಂದ ಆರಂಭಗೊಂಡಿದ್ದು ಸೆಪ್ಟೆಂಬರ್ 02,2021ರಂದು ಕೊನೆಗೊಳ್ಳಲಿದೆ

ಎಸ್‌ಬಿಐ ಎಸ್‌ಸಿಒ ನೇಮಕಾತಿ 2021 ಹುದ್ದೆಗಳ ವಿವರ: ಉಪ ವ್ಯವಸ್ಥಾಪಕ (Agri Spl) – 10 ಹುದ್ದೆಗಳು ಸಹಾಯಕ ವ್ಯವಸ್ಥಾಪಕ (ಮಾರ್ಕೆಟಿಂಗ್ ಮತ್ತು ಸಂವಹನ) – 04 ಹುದ್ದೆಗಳು ಸಂಬಂಧ ವ್ಯವಸ್ಥಾಪಕ (OMP) – 06 ಹುದ್ದೆಗಳು ಉತ್ಪನ್ನ ನಿರ್ವಾಹಕ (OMP) – 02 ಹುದ್ದೆಗಳು ಒಟ್ಟು – 22 ಹುದ್ದೆಗಳು

ಎಸ್‌ಬಿಐ ಎಸ್‌ಸಿಒ ನೇಮಕಾತಿ 2021 ವಯೋಮಿತಿ: ಎಸ್‌ಬಿಐ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಯಪಡಿಸಿರುವಂತೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು ಜುಲೈ 1,2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ


By Priya

Leave a Reply

Your email address will not be published. Required fields are marked *