ಕಲಬುರಗಿಯ ಸೇಡಂ ರಸ್ತೆಯಲ್ಲಿರುವ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕಲಬುರಗಿ, ಯಾದಗಿರಿ ಹಾಗೂ ರಾಯಚೂರ ಜಿಲ್ಲೆಗಳ ರೈತರಿಗೆ 2021ರ ಡಿಸೆಂಬರ್ 9 ಹಾಗೂ 10 ರಂದು ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ಡಿಸೆಂಬರ್ 14 ಹಾಗೂ 15 ರಂದು ವೈಜ್ಞಾನಿಕ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

 

 

 

ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಮಾಸ್ಕ್‌ ಅನ್ನು ಅವರೇ ತರಬೇಕು. ರೈತರಿಗೆ ಯಾವುದೇ ಭತ್ಯೆ ಇರುವುದಿಲ್ಲ. ಮಧ್ಯಾಹ್ನ ಅಲ್ಪ ಉಪಹಾರ ನೀಡಲಾಗುತ್ತದೆ. ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದವರಿಗೆ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುತ್ತದೆ.

 

 

 

ಈ ತರಬೇತಿಗೆ ಹಾಜರಾಗುವ ರೈತರು ಅರ್ಜಿಯ ಜೊತೆಗೆ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಆಧಾರ ಕಾರ್ಡ್ ಪ್ರತಿ ಲಗತ್ತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು.

 

 

 

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪಶು ಪಾಲನೆ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ಸೇಡಂ ರಸ್ತೆ ಕಲಬುರಗಿ ವಿಳಾಸಕ್ಕೆ ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-220576ಗೆ ಸಂಪರ್ಕಿಸಲು ಕೋರಲಾಗಿದೆ


By Priya

Leave a Reply

Your email address will not be published. Required fields are marked *