Join Our WhatsApp Group

ಗದಗ, ಹಾವೇರಿ, ಬಾಗಲಕೋಟೆ, ಧಾರವಾಡ ಬೆಳಗಾವಿ ಜಿಲ್ಲಾ ಗ್ರಾಮೀಣ ಜನರಿಗೆ ಮಾತ್ರ
ಸ್ವ ಉದ್ಶೋಗ ಆಸಕ್ತರಿಗೆ ಉಚಿತ ತರಬೇತಿ
ಗದಗ  ಸ್ ಬಿ ಆಯ್ ಎ ಎಸ್ ಎಫ್ ಆರ್ ಸೆಟಿ ಸಂಸ್ಥೆ ಯಲ್ಲಿ


1). ದ್ವಿ ಚಕ್ರ ವಾಹನ ರಿಪೇರಿ ತರಬೇತಿ (Two Wheeler Repair ) 30 ದಿನಗಳು ದಿನಾಂಕ 20/11/2020 ರಿಂದ ಪ್ರಾರಂಭ

2.) ಫೋಟೊಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿ 

|| Open ||

(30 ದಿನಗಳು) ದಿನಾಂಕ 28/11/2020 ರಿಂದ ಪ್ರಾರಂಭ ಉಚಿತ ತರಬೇತಿಯನ್ನು ಆರಂಭಿಸಲಾಗುವದು.
ಆದ್ದರಿಂದ ಆಸಕ್ತರು ನೇರವಾಗಿ ಸಂಸ್ಥೆಗೆ ಭೇಟಿ ನೀಡಲು ತಿಳಿಸಲಾಗಿದೆ.

 

|| Install App ||

 ಅರ್ಹತೆ ಮತ್ತು ದಾಖಲಾತಿಗಳು
1) BPL ಕಾರ್ಡ್ ಝರಾಕ್ಸ ಪ್ರತಿ
2) 2 ಪೋಟೊ

3) ಆಧಾರ ಕಾರ್ಡ್ ಝರಾಕ್ಸ ಪ್ರತಿ
4) ಶಾಲಾ ದಾಖಲಾತಿ ಅಥವಾ ಎಲ್ ಸಿ.

 

ವಯೋಮಿತಿ :- 18 ರಿಂದ 45ವರ್ಷಗಳು
ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-

 

|| Open ||

ಕರ್ನಾಟಕ ಮಾಧ್ಯಮ ಅಕಾಡೆಮಿ ಅಪ್ರೆಂಟಿಸ್ ತರಬೇತಿ; ಅರ್ಜಿ ಹಾಕಿ

ಕರ್ನಾಟಕ ಮಾಧ್ಯಮ ಅಕಾಡೆಮಿ ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಆಯೋಜಿಸಿದೆ. ಆಸಕ್ತ ಅಭ್ಯರ್ಥಿಗಳು 27-11-2020ರೊಳಗೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

 

2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಪರಿಶಿಷ್ಟ ಜಾತಿಯ 25 ಮಂದಿ ಹಾಗೂ ಪರಿಶಿಷ್ಟ ಪಂಗಡದ 10 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯ / ವಾಹಿನಿಗಳಲ್ಲಿ ತರಬೇತಿ ನೀಡಿ ಮಾಸಿಕ ರೂ. 15,000 ರೂ.ಗಳ ಸ್ಟೈಫಂಡ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಅಭ್ಯರ್ಥಿಗಳು ಅರ್ಜಿಯ ಜೊತೆ ಎಸ್. ಎಸ್. ಎಲ್. ಸಿ. ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸ್ಕ್ಯಾನ್ ಮಾಡಿ traineekma2020@gmail.com ವಿಳಾಸ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ

 

ಅಭ್ಯರ್ಥಿಗಳು ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ.

 

 

|| Watch Video ||


By Priya

Leave a Reply

Your email address will not be published. Required fields are marked *