ನೇರ ಸಂದರ್ಶನ

 

TRIFED Recruitment 2020: 30 ಪ್ರೊಕ್ಯುರ್ಮೆಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇರ ಸಂದರ್ಶನ

 

ಟ್ರೈಬಲ್ ಕಾರ್ಪೋರೇಟಿವ್ ಮಾರ್ಕೆಟಿಂಗ್ ಡೆವಲಪ್ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಟ್ರೈಫೆಡ್) 30 ಪ್ರೊಕ್ಯುರ್ಮೆಂಟ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಮುಂದೆ ಓದಿ.

 

 

ವಿದ್ಯಾರ್ಹತೆ: ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

 

 

ವಯೋಮಿತಿ: ಕನಿಷ್ಟ 19 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

 

 

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,924/- ರಿಂದ 20,522/-ರೂ ವೇತನವನ್ನು ನೀಡಲಾಗುವುದು.

 

 

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

 

 

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

 

 

ಸಂದರ್ಶನದ ವಿವರ: ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯೊಂದಿಗೆ ಅತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 17,2020 ರಿಂದ ನವೆಂಬರ್ 25,2020ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 5:30ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

 

ಸಂದರ್ಶನ ನಡೆಯುವ ಸ್ಥಳ: Shri V. Ramanathan, Regional Manager, NO.323/2. 2nd Floor, Hosur Main Road, Near Madiwala police station, Madiwala, Bangalore-560068.

 

 

 

 Notification

 

 

|| Official Website ||


By Priya

Leave a Reply

Your email address will not be published. Required fields are marked *