Join Our WhatsApp Group

UAS Dharwad Recruitment 2021: ಅರೆಕಾಲಿಕ ಶಿಕ್ಷಕ ಹುದ್ದೆಗೆ ಮಾ.30ಕ್ಕೆ ನೇರ ಸಂದರ್ಶನ

 

ಕೃಷಿ ಅರ್ಥಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಅರೆಕಾಲಿಕ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮಾರ್ಚ್ 30,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಪಿ.ಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

 

ವೇತನ: ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

 

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

 

ಸಂದರ್ಶನದ ವಿವರ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ತೆಗೆದುಕೊಂಡು ಮಾರ್ಚ್ 30,2021ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅರ್ಜಿಯನ್ನು ಯಾವುದೇ ಸಂದರ್ಭದಲ್ಲಿ ಮುಂಗಡವಾಗಿ ಕಳುಹಿಸಬಾರದು.

 

ಸಂದರ್ಶನ ನಡೆಯುವ ಸ್ಥಳ: ಡೀನ್ (ಕೃಷಿ)ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡ-580 005.

|| Notification ||

Join Our WhatsApp Group


By Priya

Leave a Reply

Your email address will not be published. Required fields are marked *