ವಿಜಯಪುರ ಪಂಚಾಯತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ.

 

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ (Library Supervisor ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನವಾಗಿದೆ.  ಹೆಚ್ಚಿನ ಮಾಹಿತಿಗೆ.

 

ಅರ್ಹತೆಗಳು: ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು. 
ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.

 

ಶೈಕ್ಷಣಿಕ ವಿದ್ಯಾರ್ಹತೆ: SSLC

 

ವಯೋಮಿತಿ: ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ18 ವರ್ಷ  ಇರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿ ಇರಬೇಕು.

 

ಕಚೇರಿ ವಿಳಾಸ: ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.

Notification


By Priya

Leave a Reply

Your email address will not be published. Required fields are marked *