VTU 1st Sem Exams : ವಿಟಿಯು ಮೊದಲ ಸೆಮಿಸ್ಟರ್ ಉಳಿದ ಇಂಜಿನಿಯರಿಂಗ್ ಪರೀಕ್ಷೆಗಳು ಮುಂದೂಡಿಕೆ

Join Our WhatsApp Group

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರವು ಏಪ್ರಿಲ್ 27,2021 ರಿಂದ 14 ದಿನಗಳ ಕಾಲ ಲಾಕ್‌ಡೌನ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇಂಜಿನಿಯರಿಂಗ್ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಪ್ರಕಟಣೆ ಹೊರಡಿಸಿದೆ.

 

ಈ ಮುಂಚೆ ಕೊರೋನಾ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮೇ 4ರ ವರೆಗೆ ವೀಕೆಂಡ್ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂ ಅನ್ನು ಜಾರಿಗೊಳಿಸಲಾಗಿತ್ತು. ಆದರೂ ಕೂಡ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಮೊದಲ ಸೆಮಿಸ್ಟರ್ ನ ಉಳಿದ ಇಂಜಿನಿಯರಿಂಗ್ ಪರೀಕ್ಷೆಗಳನ್ನು ಮುಂದುವರಿಸಲಾಗುವುದಾಗಿ ಹೇಳಿತ್ತು.

Join Our WhatsApp Group

ಮತ್ತು ಇದೇ ಸಂದರ್ಭದಲ್ಲಿ ಒಂದು ವೇಳೆ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿ ಪರೀಕ್ಷೆಗೆ ಹಾಜರಾಗದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ್ ನಲ್ಲಿ ಈ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು ಮತ್ತು ಅದನ್ನು ಮೊದಲ ಅಟೆಂಪ್ಟ್ ಎಂದು ಪರಿಗಣಿಸಲಾಗುವುದು ಎಂದು ಕೂಡ ಅವರು ತಿಳಿಸಿದ್ದರು.

 

ಆದರೆ ಇಂದು ಕರ್ನಾಟಕ ಸರ್ಕಾರ ಏಪ್ರಿಲ್ 27,2021 ರಿಂದ ಮೇ 12,2021ರ ವರೆಗೆ ಲಾಕ್‌ಡೌನ್‌ಲೋಡ್ ಘೋಷಿಸಿದ್ದು, ಇದರ ಬೆನ್ನಲ್ಲೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇಂಜಿನಿಯರಿಂಗ್ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಪ್ರಕಟಣೆ ಹೊರಡಿಸಿದೆ. ಮುಂದಿನ ಪರೀಕ್ಷಾ ದಿನಾಂಕಗಳನ್ನು ಲಾಕ್‌ಡೌನ್‌ ಮುಗಿದ ಪ್ರಕಟಿಸುವುದಾಗಿ ಸುತ್ತೋಲೆಯಲ್ಲಿ ತಿಳಿಸಿದೆ.

Join Our WhatsApp Group


By Priya

Leave a Reply

Your email address will not be published. Required fields are marked *